ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನವರಿ 22 ರಂದು ಶ್ರೀ ರಾಮಮಂದಿರದಲ್ಲಿ ನಡೆಯುವ ಬಾಲರಾಮನ ಪ್ರಾಣ ಪ್ರತಿಷ್ಠೆಗೆ (Pran Prathistha Ceremony) ಸಕಲ ಸಿದ್ಧತೆಗಳು ನಡೆಯುತ್ತಿದ್ದು, ರಾಮಲಲಾ ಮೂರ್ತಿಯು (Lord Rama Idol) ಅಯೋದ್ಯೆ ರಾಮಮಂದಿರವನ್ನು ಪ್ರವೇಶಿಸಿದೆ.
ಸಂಜೆ ಭಗವಾನ್ ರಾಮನ ವಿಗ್ರಹವನ್ನು ಹೊತ್ತ ಟ್ರಕ್ ಅನ್ನು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ರಾಮ ಮಂದಿರದ ಆವರಣಕ್ಕೆ ತರಲಾಯಿತು. ಈ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ
ಭವ್ಯ ರಾಮಮಂದಿರದ ಸಂಕೀರ್ಣಕ್ಕೆ ವಿಗ್ರಹವನ್ನು ಕೊಂಡೊಯ್ಯಲು ಮಂಗಳವಾರ ರಾತ್ರಿಯಿಂದಲೇ ಸಿದ್ಧತೆ ನಡೆದಿತ್ತು. 150-200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಮೆರವಣಿಗೆಗಾಗಿ ತಡರಾತ್ರಿ ಹೂವಿನಿಂದ ಅಲಂಕರಿಸಿದ ಟ್ರಕ್ ಮೇಲೆ ಇರಿಸಲಾಯಿತು. ಇಂದು ಈ ಟ್ರಕ್ ರಾಮಮಂದಿರದ ಆವರಣವನ್ನು ಪ್ರವೇಶಿಸಿದೆ.
51 ಇಂಚು ಎತ್ತರದ (4.3 ಅಡಿ) ರಾಮನ ಮೂರ್ತಿಯನ್ನು ಅಯೋಧ್ಯೆ ರಾಮಮಂದಿರದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾಗುತ್ತದೆ. ನಾಳೆ (ಗುರುವಾರ) ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಲಿದೆ.