ರಾಮ ಮಂದಿರ ಸಮಾರಂಭ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮ ಮಂದಿರದ ಉದ್ಘಾಟನಾ ಸಮಾರಂಭ ನರೇಂದ್ರ ಮೋದಿ (Narendra Modi) ರಾಜಕೀಯ ಕಾರ್ಯಕ್ರಮ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಮಂಗಳವಾರ ಹೇಳಿದ್ದಾರೆ.

ಆರ್‌ಎಸ್‌ಎಸ್ ಮತ್ತು ಬಿಜೆಪಿ (BJP) ಜನವರಿ 22 ರ ಕಾರ್ಯವನ್ನು ಸಂಪೂರ್ಣವಾಗಿ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದೆ. ಇದು ಆರ್‌ಎಸ್‌ಎಸ್ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದರು.

ಹಿಂದು ಧರ್ಮದ ವರಿಷ್ಠರು, ಧರ್ಮದ ಮಠಾಧಿಪತಿಗಳು ಸಹ ಜನವರಿ 22 ರ ಸಮಾರಂಭ ರಾಜಕೀಯ ಕಾರ್ಯ ಎಂದು ತಮ್ಮ ಅಭಿಪ್ರಾಯವನ್ನು ಎಂದು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಭಾರತದ ಪ್ರಧಾನ ಮಂತ್ರಿಯ ಸುತ್ತ ವಿನ್ಯಾಸಗೊಳಿಸಲಾದ ಮತ್ತು ಆರೆಸ್ಸೆಸ್ ಸುತ್ತ ವಿನ್ಯಾಸಗೊಳಿಸಲಾದ ರಾಜಕೀಯ ಕಾರ್ಯಕ್ರಮಕ್ಕೆ ಹೋಗುವುದು ನಮಗೆ ಸರಿಯನಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿ, ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ನಿರಾಕರಿಸಿದ ಕೆಲವು ದಿನಗಳ ನಂತರ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!