ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಪ್ರಯೋಜಕ: ನಾಲಿಗೆ ಹರಿಬಿಟ್ಟ ಸಮಾಜವಾದಿ ನಾಯಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಅಯೋಧ್ಯೆಯಲ್ಲಿರುವ ರಾಮ ಮಂದಿರ ನಿಷ್ಪ್ರಯೋಜಕ ಆಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ (Ram Gopal Yadav) ಅವರು ಮಂಗಳವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಮ್ಮ ದೇಶದಲ್ಲಿ ದೇವಸ್ಥಾನಗಳನ್ನು ಈ ರೀತಿ ನಿರ್ಮಿಸಿಲ್ಲ. ರಾಮ ​​ಮಂದಿರವನ್ನು ವಾಸ್ತು ಪ್ರಕಾರ ನಿರ್ಮಿಸಿಲ್ಲ. ನಾನು ಪ್ರತಿದಿನ ರಾಮನನ್ನು ಆರಾಧಿಸುತ್ತೇನೆ. ಕೆಲವರು ರಾಮನವಮಿಯಂದು ಪೇಟೆಂಟ್ ಮಾಡಿದ್ದಾರೆ. ಆದರೆ ಅಯೋಧ್ಯೆಯಲ್ಲಿರುವ ಆ ದೇವಾಲಯವು ನಿಷ್ಪ್ರಯೋಜಕ ಆಗಿದೆ ಎಂದು ಹೇಳಿದ್ದಾರೆ.

ರಾಮ್ ಗೋಪಾಲ್ ಯಾದವ್ ಹೇಳಿಕೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮತ ಬ್ಯಾಂಕ್ ರಾಜಕೀಯಕ್ಕಾಗಿ ಜನರ ನಂಬಿಕೆಯೊಂದಿಗೆ ಆಟವಾಡುತ್ತಿದ್ದಾರೆ. ಅವರು ಯಾವಾಗಲೂ ರಾಮ ಮಂದಿರವನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!