ರಾಮ ಮಂದಿರ ಉದ್ಘಾಟನೆ ನೇರ ಪ್ರಸಾರ ನಿಷೇಧ: ತಮಿಳುನಾಡು ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜನವರಿ 22 ರನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ.

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ರಾಜ್ಯ ಸರ್ಕಾರ ರಾಮಮಂದಿರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನು ನಿಷೇಧಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.

ಈ ಕುರಿತು ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ತಮಿಳುನಾಡಿನಲ್ಲಿ 200 ಕ್ಕೂ ಹೆಚ್ಚು ಶ್ರೀರಾಮನ ದೇವಾಲಯಗಳಿವೆ. ಜನವರಿ 22 ರಂದು ಭಗವಾನ್ ಶ್ರೀರಾಮನ ಹೆಸರಿನಲ್ಲಿ ಪೂಜೆ, ಭಜನೆ, ಪ್ರಸಾದ, ಅನ್ನದಾನದಿಂದ ದೂರವಿರಲು ತಿಳಿಸಲಾಗಿದೆ. ಪೊಲೀಸರು ಖಾಸಗಿ ದೇವಸ್ಥಾನಗಳಲ್ಲಿ ಸಹ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಲ್ಲಿಸಲು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ, ದ್ವೇಷದ ಕ್ರಮವನ್ನು ಬಲವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಶ್ರೀರಾಮನ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮವನ್ನು ಆಯೋಜಿಸಿದರೆ ಪೆಂಡಾಲ್ ಗಳನ್ನು ಕೆಡವುವುದಾಗಿ ಎಚ್ಚರಿಕೆ ನೀಡುವುದಾಗಿ ಪೊಲೀಸರು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದ್ದಾರೆ.

ನೇರ ಪ್ರಸಾರವನ್ನು ನಿಷೇಧಿಸುವ ಮತ್ತು ತಡೆಯುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ಟೀಕಿಸಿದ ಅವರು, ಇಡೀ ರಾಷ್ಟ್ರವು ದೀಪಾವಳಿಯಂತೆಯೇ ಹಬ್ಬದ ಉತ್ಸಾಹದಿಂದ ರಾಮಮಂದಿರ ಉದ್ಘಾಟನೆ ದಿನ ಆಚರಿಸುತ್ತಿರುವಾಗ ತಮಿಳುನಾಡು ಸರ್ಕಾರ ಹಗೆತನದಿಂದ ತುಂಬಿದ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!