March 25, 2026
Wednesday, March 25, 2026
spot_img

ಯುಪಿಯಲ್ಲಿ ರಾಮನವಮಿ ಸಂಭ್ರಮ: ಸಿಎಂ ಯೋಗಿ ಸರಕಾರದಿಂದ ಎರಡು ದಿನಗಳ ರಜೆ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಾದ್ಯಂತ ಮಾರ್ಚ್​ 26 ರಂದು ರಾಮನವಮಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ಉತ್ತರ ಪ್ರದೇಶ ಯೋಗಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ಮಾರ್ಚ್​ 26 ಮತ್ತು ಮಾರ್ಚ್​ 27 ಎರಡು ದಿನ ಸಾರ್ವಜನಿಕ ರಜೆ ಘೋಷಿಸಿದ್ದಾರೆ.

ಉತ್ತರ ಪ್ರದೇಶದ ಮನೆ ಮನೆಗಳಲ್ಲಿ ರಾಮನವಮಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಹಾಗಾಗಿ ಜನರ ಧಾರ್ಮಿಕ ಭಾವನೆಗಳಿಗೆ ಗೌರವ ನೀಡುವ ಸಲುವಾಗಿ ಸಿಎಂ ಯೋಗಿ ಆದಿತ್ಯನಾಥ್​ ರಾಜ್ಯದಲ್ಲಿ ಎರಡು ದಿನಗಳ ಕಾಲ ರಜೆ ಘೋಷಿಸಿದ್ದಾರೆ.

ರಾಮನವಮಿಯಂದು ಜನರು ಉಪವಾಸ ಕೈಗೊಂಡು, ರಾಮಾಯಣ ಪಠಣ ಮಾಡುತ್ತಾರೆ ಮತ್ತು ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಭಜನೆಗಳನ್ನು ಮಾಡುತ್ತಾರೆ. ಜನರ ಧಾರ್ಮಿಕ ಆಚರಣೆಗಳಿಗೆ ಅನುಕೂಲ ಮಾಡಿಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !