ರಾಷ್ಟ್ರೀಯ ಸ್ಮಾರಕವಾಗಿ ರಾಮಸೇತು: ‘ಸುಪ್ರೀಂ’ ವಿಚಾರಣೆಗೆ ನಿಗದಿಯಾಗಿದೆ ದಿನ!  

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮ ಸೇತು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿ ವಿಚಾರಣೆಯನ್ನು ಜು.26ರಂದು ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ಇದೊಂದು ಪುಟ್ಟ ವಿಚಾರವಾಗಿದ್ದು, ತುರ್ತು ವಿಚಾರಣೆ ನಡೆಸಬೇಕು ಎಂದು ಸ್ವಾಮಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ,   ನ್ಯಾಯಮೂರ್ತಿ ಕೃಷ್ಣ ಮುರಾರಿ ಹಾಗೂ ಹಿಮಾ ಕೊಯ್ಲಿ ಅವರಿದ್ದ ಪೀಠಕ್ಕೆ ಮನವಿ ಮಾಡಿದರು.
ಇದನ್ನು ನನ್ನ ನಿವೃತ್ತಿಯ ನಂತರ ವಿಚಾರಣೆಗೆ ಪಟ್ಟಿ ಮಾಡೋಣ ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರತಿಕ್ರಿಯೆಸಿದಾಗ ನ್ಯಾಯಾಲಯ ಕೆಲಕಾಲ ನಗೆಗಡಲಿಗಿಳಿಯಿತು. ಬಳಿಕ ಮುಖ್ಯ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಗೆ ಜು.26ರ ದಿನ ನೀಡಿದರು.
ಯುಪಿಎ-1ರ ಸರ್ಕಾರದ ಅವಧಿಯಲ್ಲಿನ ವಿವಾದಿತ ಸೇತುಸಮುದ್ರಂ ಹಡಗು ಕಾಲುವೆ ಯೋಜನೆಯ ವಿರುದ್ಧ ಸುಬ್ರಮಣಿಯನ್ ಸ್ವಾಮಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ರಾಮ ಸೇತು ರಕ್ಷಿಸಿ, ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಬೇಕೆಂದು ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!