ರಾಷ್ಟ್ರೀಯ ಪಾರಂಪರಿಕ ಸ್ಮಾರಕವಾಗಿ ರಾಮಸೇತುವೆ: ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರವನ್ನು ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ. ಪಿ.ಎಸ್‌.ನರಸಿಂಹ ಅವರಿದ್ದ ಪೀಠ, ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿರುವ ಪಿಐಎಲ್‌ ವಿಚಾರಣೆಗೆ ಸಮ್ಮತಿ ನೀಡಿದೆ.

ಜ.19ರಂದು ರಾಮಸೇತುವನ್ನು(Ram Setu) ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವ ಕುರಿತಾಗಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ (Solicitor General Tushar Mehta)ನ್ಯಾಯಾಲಯಕ್ಕೆ ತಿಳಿಸಿದ್ದರು. ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಎಂದು ಘೋಷಿಸುವ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಕಳೆದ ಜನವರಿಯಲ್ಲಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.

ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿತ್ತು. ಇದೇ ವೇಳೆ, ಅಗತ್ಯಬಿದ್ದರೆ ನೀವು ಕೇಂದ್ರ ಸರ್ಕಾರಕ್ಕೆ ಈ ಕುರಿತು ಹೆಚ್ಚಿನ ಮಾಹಿತಿ ನೀಡಬಹುದು ಎಂದು ಸುಬ್ರಮಣಿಯನ್‌ ಸ್ವಾಮಿ ಅವರಿಗೆ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರ ಪೀಠ ಹೇಳಿತ್ತು.

ಆದ್ರೆಸುಬ್ರಮಣಿಯನ್‌ ಸ್ವಾಮಿ (Subramanian Swamy), ‘ನಾನು ಯಾರನ್ನೂ ಭೇಟಿ ಮಾಡುವುದಿಲ್ಲ. ಇದು ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲೇ ಇತ್ತು. ಅವರೇ ಆರು ವಾರಗಳಲ್ಲಿ ನಿರ್ಧರಿಸಲಿ. ನಾನು ಮತ್ತೆ ಸುಪ್ರೀಂಕೋರ್ಟ್‌ಗೆ ಬರುತ್ತೇನೆ’ ಎಂದು ಹೇಳಿದರು. ಅದಕ್ಕೆ ಒಪ್ಪಿದ ಸುಪ್ರೀಂಕೋರ್ಟ್‌, ಕೇಂದ್ರ ಸರ್ಕಾರ (central government) ತೆಗೆದುಕೊಳ್ಳುವ ನಿರ್ಧಾರ ನಿಮಗೆ ತೃಪ್ತಿ ತರದಿದ್ದರೆ ಮಧ್ಯಂತರ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತು.

ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‌ ಗೆ ಮಾಹಿತಿ ಸಲ್ಲಿಸಿದ ಸಾಲಿಸಿಟರ್‌ ಜನರಲ್‌ (Solicitor General) ತುಷಾರ್‌ ಮೆಹ್ತಾ (Tushar Mehta), ರಾಮಸೇತುವಿಗೆ ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಸ್ಥಾನಮಾನ ನೀಡುವ ಕುರಿತಾದ ಪ್ರಕ್ರಿಯೆ ಕೇಂದ್ರ ಸಂಸ್ಕೃತಿ ಸಚಿವಾಲಯದಲ್ಲಿ (Union Ministry of Culture) ಪ್ರಗತಿಯಲ್ಲಿದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!