spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ರಾಮಜನ್ಮಭೂಮಿ ಭೂಮಿಪೂಜೆಗೆ ಒಂದು ವರ್ಷ: ಸಮಾರಂಭದಲ್ಲಿ ವರ್ಚುವಲ್ ಆಗಿ ಪ್ರಧಾನಿ ಮೋದಿ ಭಾಗಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹಿಂದೂಗಳ ದಶಕಗಳ ಕನಸಿನ ಕ್ಷೇತ್ರ ಅಯೋಧ್ಯೆಯ ಶ್ರೀರಾಮಮಂದಿರದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಇಂದಿಗೆ ಒಂದು ವರ್ಷ. ವಾರ್ಷಿಕೋತ್ಸವದ ಹಿನ್ನೆಲೆ ಇಂದು ಪಡಿತರ ವಿತರಣೆ ಯೋಜನೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ವರ್ಚುವಲ್ ಆಗಿ ಭಾಗಿಯಾಗಲಿದ್ದಾರೆ.
ರಾಮಮಂದಿರ ಭೂಮಿಪೂಜೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಇಂದು ರಾಮಲಲ್ಲಾಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಈ ವಿಶೇಷ ದಿನದಂದು ರಾಮಲಲ್ಲಾ ಗೆ ಹಳದಿ ರೇಷ್ಮೆ ವಸ್ತ್ರದಲ್ಲಿ ಅಲಂಕಾರ ಮಾಡಲಾಗಿದ್ದು, ಧಾರ್ಮಿಕ ಆಚರಣೆಗೆ ಅವಕಾಶ ನೀಡಲಾಗಿದೆ. ಮಧ್ಯಾಹ್ನ 1 ಗಂಟೆಗೆ ಉಚಿತ ಪಡಿತರ ವಿತರಣೆ ಮಾಡಲಿದ್ದು, 500ಕ್ಕೂ ಹೆಚ್ಚು ಮಂದಿ ಭಾಗಿಯಾಗಲಿದ್ದಾರೆ.
ರಾಮಮಂದಿರ ಕಟ್ಟಡ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದ್ದು, 2023ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss