ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ರಾಮಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ದಲಿತ ಶಾಸಕ ಟಿಕಾರಾಂ ಜುಲ್ಲಿ ಭಾಗವಹಿಸಿದ ಬೆನ್ನಲ್ಲೇ, ಮಂದಿರವನ್ನು ‘ಗಂಗಾ ಜಲ’ ಸಿಂಪಡಿಸಿ ಶುದ್ಧೀಕರಿಸಿದ್ದಾರೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಈ ಕುರಿತು ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ‘ಬಿಜೆಪಿಯ ದಲಿತ ವಿರೋಧಿ ನಡೆ’. ಈ ರೀತಿಯ ನಡವಳಿಕೆಗಾಗಿ ಬಿಜೆಪಿಯ ಉನ್ನತ ನಾಯಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿಲ್ಲಿಯೇ ದಲಿತವಿರೋಧಿ, ತಾರತಮ್ಯದ ಮನಃಸ್ಥಿತಿ ಬೇರೂರಿದೆ ಎಂದು ಜೈರಾಮ್ ರಮೇಶ್ ಅವರು ‘ಎಕ್ಸ್’ ಜಾಲತಾಣದ ಮೂಲಕ ಟೀಕಿಸಿದ್ದಾರೆ.
ಇತ್ತ ಶುದ್ಧೀಕರಣಕ್ಕೆ ಜಾತಿ ಆಯಾಮವಿಲ್ಲ ಎಂದು ಬಿಜೆಪಿ ಮುಖಂಡ ಗ್ಯಾನ್ ದೇವ್ ಅಹುಜಾ ಹೇಳಿದ್ದು, ರಾಮನ ಅಸ್ತಿತ್ವವನ್ನೇ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ರಾಮಮಂದಿರಕ್ಕೆ ಭೇಟಿ ನೀಡುವ ನೈತಿಕ ಅಧಿಕಾರವೇ ಇಲ್ಲ’ ಎಂದು ಟೀಕಿಸಿದ್ದಾರೆ.