2024ರ ಜ.1 ರಂದು ರಾಮ ಮಂದಿರ ಲೋಕಾರ್ಪಣೆ: ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜನವರಿ 1, 2024 ರಂದು ರಾಮಮಂದಿರ ಸಿದ್ಧವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಣೆ ಮಾಡಿದ್ದಾರೆ.

ತ್ರಿಪುರಾದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅಮಿತ್‌ ಶಾ, ರಾಹುಲ್‌ ಬಾಬಾ ಕೇಳಿ, 2024ರ ಜನವರಿ 1 ರಂದು ಬೃಹತ್‌ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಿದ್ದಾರೆ.

ಜನವರಿ 1, 2024 ರೊಳಗೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಟಿಕೆಟ್ ಕಾಯ್ದಿರಿಸುವಂತೆ ಜನರನ್ನು ಆಹ್ವಾನಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಶಾ, ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಅಡ್ಡಿಪಡಿಸಿ ಸಮಸ್ಯೆಯನ್ನು ದೀರ್ಘಕಾಲದವರೆಗೆ ನ್ಯಾಯಾಲಯದ ವ್ಯಾಪ್ತಿಯಲ್ಲಿ ಇರಿಸಿತ್ತು. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಮೋದಿಯವರು ದೇವಾಲಯದ ನಿರ್ಮಾಣವನ್ನು ಪ್ರಾರಂಭಿಸಿದರು ಎಂದು ವಾಗ್ದಾಳಿ ನಡೆಸಿದರು.

2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯುವ ಮೊದಲೇ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದರು..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!