ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದಲ್ಲಿರುವ ರಾಮದೇವರ ಬೆಟ್ಟವನ್ನು ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದು, ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ.
ರಾಮ ಮಂದಿರವಾದರೂ ಕಟ್ಟಲಿ, ಅಶ್ವತ್ಥನಾರಾಯಣ ಮಂದಿರವಾದರೂ ಕಟ್ಟಲಿ ನಮ್ಮದೇನೂ ತಕರಾರು ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸುತ್ತೇವೆ ಎಂದು ಅಶ್ವತ್ಥ ನಾರಾಯಣ ಅವರು ಹೇಳಿದ್ದರು.
ಅಲ್ಲಿ ರಾಮಮಂದಿರವಾದ್ರೂ ಕಟ್ಲಿ, ಸೀತಾ ಮಂದಿರವಾದ್ರೂ ಕಟ್ಲಿ, ಅಶ್ವತ್ಥನಾರಾಯಣ ಮಂದಿರವಾದರೂ ಕಟ್ಟಿಕೊಳ್ಳಲಿ ನಮ್ಮ ತಕರಾರು ಏನಿಲ್ಲ ಎಂದು ಹೇಳಿದ್ದಾರೆ.