ರಾಮಕೃಷ್ಣ ಕೊಲೆ ಕೇಸ್: ಡಾ. ರೇಣುಕಾ ಪ್ರಸಾದ್ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

12 ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ಪ್ರಾಂಶುಪಾಲರಾಗಿದ್ದ ಪ್ರೊ.ಎ.ಎಸ್‌ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ದೋಷಿಗಳಾಗಿರುವ ಕುರುಂಜಿ ವೆಂಕಟರಮಣ ಗೌಡರ ಪುತ್ರ ಡಾ. ರೇಣುಕಾ ಪ್ರಸಾದ್‌ ಸೇರಿದಂತೆ ಆರೋಪಿಗಳಲ್ಲಿ ಒಬ್ಬರನ್ನು ಹೊರತುಪಡಿಸಿ ಐವರು ಆರೋಪಿಗಳಿಗೆ ಇಂದು ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೆ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿಸಿತ್ತು. ಆದರೆ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.

ವೀಡಿಯೋ ಕಾನ್ಪರೆನ್ಸ್ ಮೂಲಕ ಹೈ ಕೋರ್ಟ್ ನ್ಯಾಯಾಧೀಶರು ಅಪರಾಧಿಗಳ ಅಹವಾಲು ಆಲಿಸಿ ಬಳಿಕ ಶಿಕ್ಷೆಯ ತೀರ್ಪು ಪ್ರಕಟಿಸಿದರು.

ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು.
ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!