October 12, 2026
Monday, October 12, 2026
spot_img

ಸಚಿವ ಸ್ಥಾನಕ್ಕೆ ರಾಜೀನಾಮೆ, ಬೆಂಗಳೂರಿನಲ್ಲಿ ರಾಮಲಿಂಗಾರೆಡ್ಡಿ ಬೆಂಬಲಿಗರಿಂದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಖಾತೆ ಬದಲಾವಣೆ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕೋರಮಂಗಲದಲ್ಲಿರುವ ಕಚೇರಿಯ ಮುಂಭಾಗ ಬೆಂಬಲಿಗರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ರಾಮಲಿಂಗಾರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗುತ್ತಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಬೆಂಬಲಿಗರು ರಾಮಲಿಂಗಾ ರೆಡ್ಡಿ ಕಾರಿಗೆ ಅಡ್ಡಬಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದರು. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಸಂಭವಿಸಿದ್ದು, ಪರಿಸ್ಥಿತಿ ಬಿಗಡಾಯಿಸಿತ್ತು. ಹೈಕಮಾಂಡ್ ಮತ್ತು ರಾಜ್ಯ ನಾಯಕರು ಕೂಡಲೇ ಮಧ್ಯಪ್ರವೇಶಿಸಿ ರಾಮಲಿಂಗಾ ರೆಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದಾರೆ.

ಜಲಸಂಪನ್ಮೂಲ ಖಾತೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಗಿದೆ. ಆದರೆ ಈ ಖಾತೆ ಬೇಡ ನನಗೆ ಬೆಂಗಳೂರು ಅಭಿವೃದ್ಧಿ ಖಾತೆಯೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮಾತಿಗೆ ಮುಖ್ಯಮಂತ್ರಿಗಳು ತಪ್ಪಿದ್ದಾರೆ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.

Must Read