ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರ ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಿ ಬೆಂಗಳೂರು ದಕ್ಷಿಣ ಎಂದು ಮಾಡಲು ಹೊರಟಿದ್ದು, ಇತ್ತ ಈ ವಿಚಾರ ಸಂಬಂಧ ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಭಗವಾನ್ ರಾಮನ ಹೆಸರನ್ನ ಕೈ ಬಿಟ್ಟು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಯಿಸಿದ್ದಾರೆ. ಹಿಂದುಗಳ ಅಸ್ತಿತ್ವಕ್ಕೆ ಅಪಾಯ ಇದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಿಂದುಗಳು ಮತ್ತು ಅವರ ನಂಬಿಕೆಗಳ ಬಗ್ಗೆ ಕಾಂಗ್ರೆಸ್‌ನ ತೀವ್ರ ದ್ವೇಷವು ನಮ್ಮ ನಾಗರಿಕತೆಯ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ. ಹಿಂದುಗಳು ತಮ್ಮ ಏಕೈಕ ತಾಯ್ನಾಡಿನಲ್ಲಿ ಉಳಿಯಬೇಕಾದರೆ ಕಾಂಗ್ರೆಸ್ ಸಾಯಬೇಕು. ಈ ಆಯ್ಕೆ ಬಿಟ್ಟರೆ ಬೇರೆ ದಾರಿಯಿಲ್ಲ ಎಂದು ಬರೆದಿದ್ದಾರೆ.
ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರಕ್ಕೆ ಬಿಜೆಪಿ, ಜೆಡಿಎಸ್ ವಿರೋಧ ವ್ಯಕ್ತಪಡಿಸಿವೆ.