ಹೊಸದಿಗಂತ ವರದಿ, ಮಡಿಕೇರಿ:
ಪೊಲೀಸರೆಂದರೆ ಮತ್ತೊಬ್ಬರ ರಕ್ತ ಹೀರುವವರು ಎಂಬ ಭಾವನೆ ಜನರಲ್ಲಿದೆ. ಆದರೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿ ಮೇಕೇರಿಯ ಬಿ.ಎಂ.ರಾಮಪ್ಪ ಅವರು 40 ಬಾರಿ ರಕ್ತದಾನ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.
ಕೊಡಗು ಬ್ಲಡ್ ಡೋನರ್ಸ್ ಸಂಘಟನೆಯ ಎರಡನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಮಡಿಕೇರಿಯ ಬಾಲಭವನದಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರದಲ್ಲಿ 40ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ಅವರು ಇತರರಿಗೆ ಮಾದರಿಯಾಗಿದ್ದಾರೆ.
ವಾರ್ಷಿಕೋತ್ಸವ ಸಮಾರಂಭದಲ್ಲಿ ಬಿ.ಎಂ.ರಾಮಪ್ಪ ಅವರನ್ನು ಸಂಘಟನೆಯ ಪ್ರಮುಖರು ಸನ್ಮಾನಿಸಿ ಗೌರವಿಸಿದರು.