September 5, 2026
Saturday, September 5, 2026
spot_img

‘ರಾಮಾಯಣ’ ಹವಾ | ‘ಗೊತ್ತಿರೋರಿಗೆ ಮಾತ್ರ ಗೊತ್ತು’… ರಾಧಿಕಾ ಕ್ಯಾಪ್ಶನ್‌ಗೆ ಹೊಸ ಅರ್ಥ ಹುಡುಕಿದ ಫ್ಯಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದೇ ವೇಳೆ ನಟಿ ರಾಧಿಕಾ ಪಂಡಿತ್ ಹಂಚಿಕೊಂಡಿರುವ ವಿಶೇಷ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಅದರ ಕ್ಯಾಪ್ಶನ್ ಮತ್ತು ಹಿನ್ನೆಲೆ ಸಾಕಷ್ಟು ಕುತೂಹಲ ಮೂಡಿಸಿದೆ.

ರಾವಣನ ಮೂರ್ತಿ ಮುಂದೆ ರಾಧಿಕಾ ಪೋಸ್

ರಾಧಿಕಾ ಪಂಡಿತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಮುದ್ರ ತೀರದ ಬಳಿ ಇರುವ ಬೃಹತ್ ರಾವಣನ ಪ್ರತಿಮೆಯ ಮುಂದೆ ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಕೈಯಲ್ಲಿ ಕತ್ತಿ ಮತ್ತು ಗುರಾಣಿ ಹಿಡಿದಿರುವ ರಾವಣನ ಪ್ರತಿಮೆ ಎದುರು ನಿಂತಿರುವ ಅವರು, “ಗೊತ್ತಿರೋರಿಗೆ ಮಾತ್ರ ಗೊತ್ತು” ಎಂಬ ಕ್ಯಾಪ್ಶನ್ ನೀಡಿದ್ದು, ಈ ಪೋಸ್ಟ್ ಈಗ ವೈರಲ್ ಆಗಿದೆ.

ಇದನ್ನೂ ಓದಿ:

ಅಭಿಮಾನಿಗಳಿಂದ ವಿಭಿನ್ನ ಪ್ರತಿಕ್ರಿಯೆ

ಯಶ್ ಅವರು ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರಾಧಿಕಾ ಅವರ ಪೋಸ್ಟ್‌ಗೆ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವರು ತಮಾಷೆಯಾಗಿ “ರಾವಣನ ಮಂಡೋದರಿ” ಎಂದು ಕಾಮೆಂಟ್ ಮಾಡುತ್ತಿದ್ದರೆ, ಇನ್ನೂ ಕೆಲವರು ಚಿತ್ರದ ಮೇಲಿನ ಕುತೂಹಲವನ್ನು ವ್ಯಕ್ತಪಡಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !