ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ: ರಂಭಾಪುರಿ ಶ್ರೀಗಳ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ವೀರಸೋಮೇಶ್ವರ ಮಹಾಸ್ವಾಮಿಜಿಗಳು ಕರೆ ನೀಡಿದ್ದಾರೆ

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 209ರಲ್ಲಿ ಮತದಾನ ಮಾಡಿದ ಶ್ರೀಗಳು ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಬಾಳೆಹೊನ್ನೂರಿನ ಮತಗಟ್ಟೆಯಲ್ಲಿ ಶ್ರೀಗಳ ಮತದಾನ ಬಳಿಕ ಉಳಿದವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ಪದ್ಧತಿ. ಅದರಂತೆ ಜನರು ಮತದಾನ ಮಾಡಲಿದ್ದಾರೆ.

ಏಳು ಗಂಟೆಗೆ ಮೊದಲು ಮತದಾನ ಮಾಡಿದ ರಂಭಾಪುರಿ ಶ್ರೀಗಳು ಬಳಿಕ ನಾಡಿನ ಸಮಸ್ತ ಜನತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!