ಹೊಸದಿಗಂತ ಡಿಜಿಟಲ್ ಡೆಸ್ಕ್
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾ ಅವರನ್ನು ಪಿಸಿಬಿ ವಜಾಗೊಳಿಸಿದೆ.
ನಜಮ್ ಸೇಥಿ ಅವರನ್ನು ಪಿಸಿಬಿಯ ಹೊಸ ಅಧ್ಯಕ್ಷರನ್ನಾಗಿ ನೇಮಿಸಲು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶೆರಿಫ್ಅನುಮತಿ ನೀಡಿದ್ದಾರೆ.
ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಧಿಕಾರ ಪ್ರಧಾನ ಮಂತ್ರಿಗಿದ್ದು, ಹೀಗಾಗಿ ರಾಜಾ ಅವರನ್ನು ವಜಾಗೊಳಿಸಿ ಸೇಥಿ ಯನ್ನುಂ ನೇಮಕ ಮಾಡಲಾಗಿದೆ.
ಪಾಕಿಸ್ತಾನವು ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಸೋಲನ್ನು ಅನುಭವಿಸಿದ ಹಿನ್ನೆಲೆಯಲ್ಲಿ ಪಿಸಿಬಿಈ ಕ್ರಮ ಕೈಗೊಂಡಿದೆ.