ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಲ್ಲಿ ನಿನ್ನೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಸ್ಮೃತಿ ಇರಾನಿ, ವಿಧಾನಸೌಧದೊಳಗೆ ಕಾಂಗ್ರೆಸ್ ನಾಯಕರೊಬ್ಬರು ನೀಡಿರುವುದು ನಾಚಿಕೆಗೇಡಿನ ಸಂಗತಿ. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್, ಉತ್ತರ ಪ್ರದೇಶದಲ್ಲಿ ಲಡ್ಕಿ ಹೂ, ಲಡ್ ಸಕ್ತಿ ಹೂ ಎಂಬ ಘೋಷಣೆಗಳನ್ನು ಕೂಗುವ ಮೊದಲು ಕಾಂಗ್ರೆಸ್ ರಮೇಶ್ ಕುಮಾರ್ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕ್ಷಮೆ ಕೇಳಿದ ರಮೇಶ್ ಕುಮಾರ್
ಮಹಿಳೆ ಮೇಲೆ ಅತ್ಯಾಚಾರ ತಡೆಯಲಾಗದಿದ್ರೆ ಮಲಗಿ ಆನಂದಿಸಬೇಕು ಎಂದು ನಿನ್ನೆ ವಿಧಾನಸಭೆ ಕಲಾಪದಲ್ಲಿ ರಮೇಶ್ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಎಚ್ಚೆತ್ತ ರಮೇಶ್ ಕುಮಾರ್ ಇಂದು ಕಲಾಪದಲ್ಲಿ ಕ್ಷಮೆಯಾಚಿಸಿದ್ದಾರೆ.
ತಮ್ಮ ಮಾತಿನಿಂದ ಹೆಣ್ಣು ಮಕ್ಕಳಿಗೆ ನೋವಾಗಿದ್ರೇ ಪ್ರಾಮಾಣಿಕವಾಗಿ ಕ್ಷಮೆಯಾಚಿಸುವೆ ಎಂದಿದ್ದಾರೆ