Monday, September 8, 2025

ನೇಪಾಳ ಗೃಹ ಸಚಿವ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ ರಮೇಶ್‌ ಲೇಖಕ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳ ಗೃಹ ಸಚಿವ ಸ್ಥಾನಕ್ಕೆ ರಮೇಶ್‌ ಲೇಖಕ್‌ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಫೇಸ್‌ಬುಕ್‌, ಎಕ್ಸ್‌, ಯೂಟ್ಯೂಬ್‌ ನಿಷೇಧಿಸಿರುವುದನ್ನು ವಿರೋಧಿಸಿ ನೇಪಾಳದಾದ್ಯಂತ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 19 ಮಂದಿ ಮೃತಪಟ್ಟಿದ್ದಾರೆ.

ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವ ಸ್ಥಾನಕ್ಕೆ ರಮೇಶ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಂಜೆ ನಡೆದ ಸಂಪುಟ ಸಭೆಯಲ್ಲಿ ಅವರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ