Tuesday, August 16, 2022

Latest Posts

ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ: ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಜಾರಕಿಹೋಳಿ ಅವರ ವಿರುದ್ಧ ನೀಡಿದ್ದ ದೂರು ಹಿಂಪಡೆಯಲು ನಿರ್ಧರಿಸಿದ್ದಾರೆ.
ತಮ್ಮ ವಕೀಲರ ಮೂಲಕ ಪೊಲೀಸ್‌ ಠಾಣೆಗೆ ದೂರು ಹಿಂತೆಗೆದುಕೊಳ್ಳಲು ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಕೇವಲ ಆರೇ ದಿನಗಳಲ್ಲಿ ದಿನೇಶ್‌ ಕಲ್ಲಹಳ್ಳಿ ಯೂಟರ್ನ್‌ ಹೊಡೆದಿದ್ದಾರೆ.
ಈ ಪ್ರಕರಣವನ್ನು ಹಿಂಪಡೆಯಲು ಕಲ್ಲಹಳ್ಳಿ ತಮ್ಮದೇ ಲೆಟರ್‌ಹೆಡ್‌ನಲ್ಲಿ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ವಕೀಲರು ಈ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ನನ್ನ ಹೋರಾಟ ನ್ಯಾಯಕ್ಕಾಗಿ ಆಗಿತ್ತು. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು ಈ ಪ್ರಕರಣದಲ್ಲಿ ನಾನು 5 ಕೋಟಿ ಡೀಲ್ ನಲ್ಲಿ ಭಾಗಿಯಾಗಿರುವುದಾಗಿ ಆರೋಪ ಮಾಡಿದ್ದಾರೆ. ಇದರಿಂದಾಗಿ ಜನರು, ನನ್ನ ಕುಟುಂಬದವರು ನನ್ನನ್ನು ಕೆಟ್ಟದಾಗಿ ನೋಡುವಂತಾಗಿದೆ. ಇದರಿಂದ ಬೇಸರಗೊಂಡು ನಾನು ಕೇಸ್ ವಾಪಸ್ ಪಡೆಯುತ್ತಿದ್ದೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss