ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದೆ.
ಸ್ಥಳದಲ್ಲಿ ಬ್ಯಾಟರಿ, ಬ್ಯಾಗ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದು, ಸ್ಪೋಟಿಸುವ ಉದ್ದೇಶದಿಂದಲೇ ಸಂಚು ರೂಪಿಸಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳ, ಎನ್ಐಎ ಅಧಿಕಾರಿಗಳು, ಪೊಲೀಸ್ ಕಮಿಷನರ್ ದಯಾನಂದ್, ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ ಚಂದ್ರಶೇಖರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಪೋಟದ ಜಾಗದಲ್ಲಿ ಸಾಕ್ಷ್ಯ ಗಳ ಪರಿಶೀಲನೆ ಮಾಡುತ್ತಿರುವ ಪೊಲೀಸ್ ಅಧಿಕಾರಿಗಳು ಉಗ್ರರ ಕೃತ್ಯ ಇರಬಹುದು ಎಂದು ಶಂಕಿಸುತ್ತಿದ್ದಾರೆ. ಮದ್ಯಾಹ್ನ 1.05 ನಿಮಿಷಕ್ಕೆ ಸ್ಪೋಟಗೊಂಡಿದ್ದು, ಊಟದ ಸಮಯವಾದುದರಿಂದ ಹೆಚ್ಚು ಜನ ನೆರೆದಿದ್ದರು. ಕೈ ತೊಳೆಯುವ ಸಿಂಕ್ ಇಟ್ಟಿದ್ದ ಜಾಗದಲ್ಲಿ ಇದ್ದ ಬ್ಯಾಗ್ ಸ್ಪೋಟಗೊಂಡಿದ್ದು, ಇದು ಬೇಕೆಂತಲೇ ಮಾಡಿರುವ ಕೃತ್ಯ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸಿ ಸಿ ಕ್ಯಾಮರಾ ಪರಿಶೀಲನೆ ನಡೆಸಲಾಗುತ್ತಿದ್ದು, ಶಂಕಿತರಿಗಾಗಿ ಹುಡುಕಾಟ ನಡೆಯುತ್ತಿದೆ.
ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಹಿನ್ನೆಲೆ ಹೋಟೆಲ್ ಸುತ್ತಮುತ್ತ ಶಂಕಿತರು ಓಡಾಡಿರೋ ಶಂಕೆ ಹಿನ್ನೆಲೆ ಸಿಸಿಟಿವಿ ಪರಿಶೀಲನೆ ನಡೆಸುತ್ತಿರೋ ಪೊಲೀಸರು ಶಂಕಿತರಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.