ರಾಮೇಶ್ವರಂ ಬ್ಲಾಸ್ಟ್‌ : ಬಿಜೆಪಿ ಕಾರ್ಯಕರ್ತನ ವಿಚಾರಣೆ ನಡೆಸಿದ ಎನ್‌ಐಎ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಬಿಜೆಪಿ ಕಾರ್ಯಕರ್ತನ ವಿಚಾರಣೆ ಮಾಡಿದೆ.

ಶಿವಮೊಗ್ಗದ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್‌ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದ್ದು, ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ.

ಬಿಜೆಪಿ ‌ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ ಎಂದು ಹೇಳಲಾಗಿದೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು.

ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!