ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ರಾಮೇಶ್ವರಂ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ಬಳ್ಳಾರಿಯಲ್ಲಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದವನಿಗೂ ಹಾಗೂ ಬಳ್ಳಾರಿಯಲ್ಲಿ ಬಂಧಿತವಾದ ವ್ಯಕ್ತಿಗೂ ಲಿಂಕ್ ಇರುವುದನ್ನು ಎನ್‌ಐಎ ಅಧಿಕಾರಿಗಳು ಖಚಿತಪಡಿಸಿದ್ದಾರೆ.ಇಂದು ಬೆಳಗ್ಗೆ 4 ಗಂಟೆಗೆ ಶಬ್ಬಿರ್ ಎನ್ನುವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಯುವಕನನ್ನ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಇದ್ಯಾ ಲಿಂಕ್ ಅನುಮಾನದ ಮೇಲೆ ಯುವಕನ ತನಿಖೆ ಮಾಡಲಾಗುತ್ತಿದೆ.