ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಆರೋಪಿ ಮಾಝ್ ಮುನೀರ್ ನನ್ನು 7 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ನ್ಯಾಯಾಲಯವು ಆದೇಶಿಸಿದೆ.
ಮಂಗಳೂರು ಗೋಡೆ ಬರಹ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿದ್ದ ಮಾಝ್ ಮುನೀರ್ ಅಹ್ಮದ್ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲೂ ಭಾಗಿಯಾಗಿರೋ ಶಂಕೆಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವ್ಯಕ್ತ ಪಡಿಸಿದ್ದು, ಈ ಹಿನ್ನೆಲೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ಆರೋಪಿಯನ್ನು ತಮ್ಮ ಕಸ್ಟಡಿಗೆ ನೀಡುವಂತೆ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು 7 ದಿನಗಳ ಕಾಲ ಆರೋಪಿ ಮಾಝ್ ಮುನೀರ್ ಅಹ್ಮದ್ ನನ್ನು ಎನ್ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.