ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಪ್ರಕರಣ: ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆ ಹೊಟೇಲ್ ನಲ್ಲಿನ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೊಟೇಲ್ ನಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ನಗರದ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಟೇಲ್ ನಲ್ಲಿ ಕೈ ತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಯಾವುದೇ ಗ್ಯಾಸ್ ಸಿಲಿಂಡರ್ ಆಗಲಿ, ಬಾಯ್ಲರ್ ಆಗಲಿ ಇರಲಿಲ್ಲ. ಆದಾಗ್ಯೂ ಸ್ಫೋಟ ಸಂಭವಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!