ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದ್ದು. ಎನ್ಐಎ ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ. ಆದರೂ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಸಾರ್ವಜನಿಕರಿಗೆ ಎನ್ಐಎ ಮನವಿ ಮಾಡಿಕೊಂಡಿದೆ.
ಈ ಪ್ರಕರಣದ ಕುರಿತು ಈಗಾಗಲೇ ಎನ್ ಐಎ, ಬಾಂಬ್ ಯೋಜನೆ ರೂಪಿಸಿದ ಮುಸ್ಬೀರ್ ಹಾಗೂ ಯೋಜನೆ ಸಿದ್ಧಪಡಿಸಿದ ಅಬ್ದುಲ್ ಮತೀನ್ ಮತ್ತು ಆತನಿಗೆ ಸಹಾಯ ಮಾಡಿದ ಮೊಜ್ಮಲ್ ಷರೀಫ್ ನನ್ನು ವಶಪಡಿಸಿಕೊಳ್ಳಲಾಗಿದೆ.
ಇದೊಂದು ಭಯೋತ್ಪಾದಕ ದಾಳಿಯಾಗಿರುವುದರಿಂದ ತನಿಖಾಧಿಕಾರಿಗಳ ಮಾಹಿತಿ ಪ್ರಕಟಿಸುವುದರಿಂದ ತನಿಖೆ ವಿಳಂಬವಾಗುತ್ತದೆ. ಆದ್ದರಿಂದ ಪರಾರಿಯಾಗಿರುವ ಆರೋಪಿಯನ್ನು ಬಂಧಿಸಲು ಸಹಕರಿಸುವಂತೆ ಎನ್ಐಎ ಮನವಿ ಮಾಡಿದೆ.