ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: NIAಯಿಂದ ಪ್ರಮುಖ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಮೊದಲ ಆರೋಪಿಯನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ 28) ಎನ್​ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮುಸ್ಸಾವಿರ್ ಶಜೀಬ್ ಮತ್ತು ಆತನ ಸಹಚರ ಅಬ್ದುಲ್ ಮಥೀನ್ ತಾಹಾ ಅವರ ಬಂಧನಕ್ಕೆ ಬಲೆ ಬೀಸಿದ್ದಾಗಿ ಎನ್‌ಐಎ ತಿಳಿಸಿದೆ.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ತನ್ನ ತನಿಖೆಯಲ್ಲಿ ಮಹತ್ವದ ಹಂತ ಮುಟ್ಟಿದೆ. ಮೂರು ರಾಜ್ಯಗಳ ಹಲವು ನಗರಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಿದ ಬಳಿಕ ಈ ಬಂಧನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಮುಝಮ್ಮಿಲ್ ಷರೀಫ್ ರನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಕಸ್ಟಡಿಯಲ್ಲಿ ಇರಿಸಿಕೊಳ್ಳಲಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಕರ್ನಾಟಕದ 12 ಸ್ಥಳಗಳು, ತಮಿಳುನಾಡಿನ 5 ಹಾಗೂ ಉತ್ತರ ಪ್ರದೇಶದ ಒಂದು ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು ಎಂದು ತಿಳಿಸಿದೆ.

ಮಾರ್ಚ್‌ 3 ರಂದು ಎನ್‌ಐಎ ಈ ಪ್ರಕರಣವನ್ನು ಕೈಗೆತ್ತಿಕೊಂಡಿತ್ತು. ಮುಸ್ಸಾವಿರ್ ಶಜೀಬ್ ಹುಸೇನ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಈತನೇ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟು ಬ್ಲಾಸ್ಟ್‌ ನಡೆಸಿದ್ದ. ಇದಕ್ಕೆ ಇನ್ನೊಬ್ಬ ವ್ಯಕ್ತಿಯ ಸಹಾಯ ಕೂಡ ಇದೆ. ಆತನನ್ನು ಅಬ್ದುಲ್ ಮಥೀನ್ ತಾಹಾ ಎಂದು ಗುರುತಿಸಲಾಗಿದೆ. ಈತ ಎನ್‌ಐಎಗೆ ಇನ್ನೊಂದು ಪ್ರಮುಖ ಪ್ರಕರಣದಲ್ಲೂ ಬೇಕಾದ ವ್ಯಕ್ತಿ ಆಗಿದ್ದಾನೆ. ಇಬ್ಬರೂ ಸದ್ಯ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಜಾರಿಯಲ್ಲಿದೆ ಎಂದು ಪ್ರಕಟಣೆಯಲ್ಲಿ ವಿವರ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!