ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್‌ಗೆ ಸಂಬಂಧಪಟ್ಟಂತೆ ಇಂದು ಎನ್‌ಐಎ ಅಧಿಕಾರಿಗಳು ಸ್ಥಳ ಮಹಜರು ಮಾಡಿದ್ದಾರೆ.
ಆರೋಪಿ ಮುಸಾವಿರ್ನನ್ನು ಕರೆತಂದು ಎನ್‌ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸ್ಥಳೀಯವಾಗಿ ವೈಟ್ ಫೀಲ್ಡ್ ವಿಭಾಗದ 50ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಘಟನೆ ನಡೆದು ಐದು ತಿಂಗಳ ಬಳಿಕ ಆರೋಪಿ ಕರೆತಂದು ಮಹಜರು ನಡೆಸಲಾಗುತ್ತಿದೆ.
ರಾಷ್ಟ್ರೀಯ ತನಿಖಾ ದಳ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ಮಾ.1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಏಪ್ರಿಲ್ 12ರಂದು ಪ್ರಮುಖ ಆರೋಪಿಗಳನ್ನು ಎನ್‌ಐಎ ಬಂಧಿಸಿತ್ತು.