ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟವು ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದೆ. ಸರಕಾರ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಎಂಟು ತಂಡಗಳನ್ನು ರಚಿಸಿದೆ. ತನಿಖಾ ತಂಡ ಆರೋಪಿಗಳ ಜಾಡು ಹಿಡಿದಿದ್ದು, ಶಂಕಿತ ಆರೋಪಿಯ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.

ಅನುಮಾನಾಸ್ಪದ ಕೆಫೆಗೆ ಪ್ರವೇಶಿಸಿ ಸುಮಾರು ಒಂದು ಗಂಟೆಗಳ ಕಾಲ ಅಲ್ಲಿಯೇ ಓಡಾಡಿದ್ದಾನೆ. 11:15 ಕ್ಕೆ ಕೆಫೆಯನ್ನು ಪ್ರವೇಶಿಸಿ 12:10ರವರೆಗೂ ಅಲ್ಲಿಯೇ ತಿರುಗಾಡಿದ್ದಾನೆ. ಈತ ಅನುಮಾನಾಸ್ಪದವಾಗಿ ಬ್ಯಾಗ್ ಹಾಕಿಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೈಡ್ ಬ್ಯಾಗ್​​ ಒಳಗೆ ಇನ್ನೊಂದು ಬ್ಯಾಗ್ ಇಟ್ಟುಕೊಂಡಿದ್ದ. ಅದರಲ್ಲಿ ಸ್ಫೋಟಕಗಳು ಇದ್ದವು ಎಂದು ವರದಿಯಾಗಿದೆ. ಕ್ಯಾಮೆರಾದಲ್ಲಿ ಸೆರೆಯಾಗದ ಪ್ರದೇಶವನ್ನು ಶೋಧಿಸಿದ ನಂತರ ಅನುಮಾನಾಸ್ಪದ ವ್ಯಕ್ತಿ ಕೆಫೆಗೆ ಪ್ರವೇಶಿಸಿ ಚೀಲವನ್ನು ಕೈ ತೊಳೆಯುವ ಪ್ರದೇಶದಲ್ಲಿ ಕಸದ ಬುಟ್ಟಿಯಲ್ಲಿ ಬ್ಯಾಗ್ ಅನ್ನು ಬಿಟ್ಟು ಪರಾರಿಯಾಗಿರುವುದು ತಿಳಿದು ಬಂದಿದೆ.

ಕೆಫೆಯಿಂದ ಹೊರಬಂದ ನಂತರ ಶಂಕಿತ ವ್ಯಕ್ತಿ ರಸ್ತೆಯಲ್ಲಿ ವೇಗವಾಗಿ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿ ತೋರಿಸುತ್ತದೆ. ಆದರೆ ಆರೋಪಿ ಗುರುತು ಸಿಗದಂತೆ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕ್ಯಾಪ್ ಹಾಕಿಕೊಂಡಿದ್ದಾನೆ. ಹೀಗಾಗಿ ಅದೇ ವ್ಯಕ್ತಿ ಸ್ಫೋಟಕಗಳನ್ನು ಇಟ್ಟಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!