ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಇಲಾಖೆಯಿಂದ ಕೇಂದ್ರ ಅಪರಾಧ ದಳಕ್ಕೆ (CCB) ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ’ ಎಂದು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ. https://t.co/sle7T39aSg
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) March 2, 2024
ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋದ ವ್ಯಕ್ತಿ ಕೆಫೆಯ ಸಿಸಿಟಿವಿ ಹೊರತು ಪಡಿಸಿ ಬೇರೆ ಎಲ್ಲಿಯೂ ಸಿಕ್ಕಿ ಬಿದ್ದಿಲ್ಲ. ರಸ್ತೆ ಬದಿಯ ಫುಟ್ ಪಾತ್ ಮೇಲೆ ನಡೆದಿದ್ದರೆ ಸಿಸಿಟಿವಿಯಲ್ಲಿ ಸೆರೆಯಾಗ್ತಿದ್ದ. ಆದ್ರೆ ಬಾಂಬ್ ಇಟ್ಟವನು ನೇರ ರಸ್ತೆ ಯಲ್ಲಿ ನಡೆದುಕೊಂಡು ಹೋಗಿದ್ದಾನೆ. ಕೆಫೆ ನಂತರ ನೂರು ಮೀಟರ್ ಹೋಗಿರುವ ಬಗ್ಗೆಯೂ ಸಿಸಿಟಿವಿಯಲ್ಲಿ ಸೆರೆ ಆಗಿಲ್ಲ ಇಲ್ಲ. ನಂತರ ಯಾವ ಮಾರ್ಗದಲ್ಲಿ ಹೋಗಿದ್ದಾನೆ ಅನ್ನೋ ಮಾಹಿತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.