ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ಕುರಿತು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಯಾವತ್ತೂ ಹೀಗೆ ಆಗಿರಲಿಲ್ಲ.ಮಂಗಳೂರು ಬ್ಲಾಸ್ಟ್ ನಂತ್ರ ರಾಜ್ಯದಲ್ಲಿ ಹೀಗೆ ಆಗಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಗಿದ್ದು. ಯಾರು ಮಾಡಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಘಟನೆ ಸಂಬಂಧ ಎಲ್ಲರೂ ತನಿಖೆಗೆ ಸಹಕರಿಸಬೇಕು. ಹೇಗೆ ಆಗಿದೆ ಎನ್ನುವ ಬಗ್ಗೆ ತನಿಖೆಯಿಂದ ವಿಷಯ ಗೊತ್ತಾಗಬೇಕು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರೊಂದಿಗೆ ಮಾಹಿತಿ ಪಡೆದು ಪ್ರಕರಣದ ತನಿಖೆಯನ್ನು ಯಾವುದರಿಂದ ನಡೆಸಬೇಕು ಎನ್ನುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ನಮ್ಮ ಸರ್ಕಾರ ಅವಧಿಯಲ್ಲಿ ಮೊದಲ ಬಾರಿಗೆ ಹೀಗೆ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳದಲ್ಲಿ ತನಿಖೆ ಮಾಡುತ್ತಿದ್ದಾರೆ. ಎಲ್ಲ ಕಾಲದಲ್ಲಿಯೂ ನಡೆಯುತ್ತಿದೆ. ನಡೆಯಬಾರದು ಎಂದು ತಿಳಿಸಿದರು.
8 ಜನರಿಗೆ ಗಾಯವಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತ್ರ ಸ್ಫೋಟಕಕ್ಕೆ ಕಾರಣ ಏನು ಎಂಬುದು ತಿಳಿದು ಬರಲಿದೆ ಎಂದರು.