ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​​ ಪ್ರಕರಣ: ಬೆಂಗಳೂರು ಮೂಲದ ಇಬ್ಬರು NIA ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಬೆಂಗಳೂರು ನಿವಾಸಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಶನಿವಾರ (ಮಾರ್ಚ್ 23) ಸಂಜೆ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಈ ಇಬ್ಬರು ವ್ಯಕ್ತಿಗಳು ಹಂತಕನೊಂದಿಗೆ ನೇರ ಸಂಪರ್ಕ ಹೊಂದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಸದ್ಯ ಅಧಿಕಾರಿಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ವಶಕ್ಕೆ ಪಡೆದಿರುವ ಇಬ್ಬರನ್ನು ಸಹ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಆರೋಪಿಯ ಸುಳಿವು ಸಿಕ್ಕಿದೆ ಎಂದು ಮಾಹಿತಿ ಲಬ್ಯವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!