ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಇಬ್ಬರು ಆರೋಪಿಗಳು NIA ಕಸ್ಟಡಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ (Rameshwaram Cafe Blast Case) ಬಂಧನಕ್ಕೊಳಗಾದ ಇಬ್ಬರು ಆರೋಪಿಗಳನ್ನು ಎನ್‍ಐಎ (NIA) ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ (Court) ಆರೋಪಿಗಳನ್ನು 10 ದಿನಗಳ ಕಾಲ ಎನ್‍ಐಎ ಕಸ್ಟಡಿಗೆ ನೀಡಿದೆ.

ಎನ್‍ಐಎ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ಹಾಜರಾಗಿದ್ದು, ವಾದ ಮಂಡಿಸಿದರು. ಈ ವೇಳೆ ಎನ್‍ಐಎ ಎಸ್ಪಿ ಶಿವವಿಕ್ರಮ್ ಕೂಡ ಹಾಜರಿದ್ದರು.

ಆರೋಪಿಗಳನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು. ಬಳಿಕ ಕೋಲ್ಕತ್ತಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಶಂಕಿತರಾದ ಅಬ್ದುಲ್ ಮತೀನ್ ತಾಹ, ಮುಸಾವಿರ್ ಹುಸೇನ್‍ನನ್ನು ಎನ್‍ಐಎ ಪೊಲೀಸರು ಕರೆತಂದಿದ್ದರು.

ಈ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು, ಇಬ್ಬರು ಉಗ್ರರನ್ನು ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ ಎನ್ ಐಎ ಕೋರ್ಟ್ ನ ನ್ಯಾಯಾಧೀಶರ ಮನೆಯಲ್ಲಿ ಜಡ್ಜ್ ಮುಂದೆ ಹಾಜರು ಪಡಿಸಿದರು. ಈ ವೇಳೆ ಹೆಚ್ಚಿನ ತನಿಖೆಗಾಗಿ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಎನ್ ಐಎ ಅಧಿಕರಿಗಳ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಬಂಧಿತ ಇಬ್ಬರು ಉಗ್ರರನ್ನು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!