ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ಬೆನ್ನಲ್ಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಾಕಿಂಗ್ ಮಾಹಿತಿ ಬಹಿರಂಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​​ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಲಾಗಿದೆ.

ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಫೊಟದ ದಿನವೇ ಬಿಜೆಪಿ ಕಚೇರಿ ಸ್ಫೊಟಕ್ಕೂ ದುಷ್ಕರ್ಮಿ ಸಂಚು ರೂಪಿಸಿದ್ದ ಎಂಬ ಅಂಶ ಬಯಲಾಗಿದೆ.

2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್​ ವಿಫಲವಾದ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಲು ಪ್ಲ್ಯಾನ್​ ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಿದ್ದರು ಎಂದು ಎನ್​ಐಎ ವಿಶೇಷ ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​​ಶೀಟ್​​​ನಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಬಿಸಿಬಿಸಿಯಾದ ಊಟವನ್ನ ಸವಿಯುತ್ತಿದ್ದರು. ಆದರೆ ಏಕಾಏಕಿ ಹೋಟೆಲ್​ನಲ್ಲಿ ಬಾಂಬ್​ ಸ್ಫೋಟಗೊಂಡಿತ್ತು. ಊಟ ಮಾಡ್ತಿದ್ದವರು ಬಿಟ್ಟು ಓಡಿದ್ದರು. ಹೋಟೆಲ್ ಸಿಬ್ಬಂದಿ ಫಾರುಖ್, ಅಮೇಜನ್ ಕಂಪನಿಯ ಸಿಬ್ಬಂದಿ ದೀಪಾಂಶು, ಸ್ವರ್ಣಾಂಬ, ಮೋಹನ್, ನಾಗಶ್ರೀ, ಮೋಮಿ, ಬಲರಾಮ್ ಕೃಷ್ಣನ್, ನವ್ಯಾ, ಶ್ರೀನಿವಾಸ್ ಗಾಯಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here