ಹೊಸದಿಗಂತ ಡಿಜಿಟಲ್ ಡೆಸ್ಕ್:
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟವನ್ನು ಮೂರ್ಖತನದ ಘಟನೆ ಎಂದು ಬಣ್ಣಿಸುವ ಮೂಲಕ ಉಡಾಫೆ ಹೇಳಿಕೆಯನ್ನು ನೀಡಿದ್ದಾರೆ.
ಕಲಬುರಗಿಯ ಜಯದೇವ ಆಸ್ಪತ್ರೆಯಲ್ಲಿನ ಚಟುವಟಿಕೆಗಳನ್ನು ಪರಿಶೀಲಿಸಿದ ನಂತರ ಡಾ.ಶರಣ ಪ್ರಕಾಶ್ ಪಾಟೀಲ್ ಮಾಧ್ಯಮಗಳಿಗೆ ಹೇಳಿಕೆ ನೀಡಿ, ರಾಜ್ಯದಲ್ಲಿ ಶಾಂತಿ ಕದಡಲು ಕೆಲವರು ಇಂತಹ ಚಟುವಟಿಕೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರ ಇದ್ಯಾವುದಕ್ಕೂ ಅವಕಾಶ ನೀಡುವುದಿಲ್ಲ, ದೇಶದ ಅಭಿವೃದ್ಧಿಯೇ ನಮ್ಮ ಗುರಿ. ಇಂತಹ ಸಣ್ಣ ಘಟನೆ ನಮ್ಮನ್ನು ಬೆಚ್ಚಿ ಬೀಳಿಸುವುದಿಲ್ಲ ಎಂದು ಹೇಳಿದ್ದಾರೆ.