ರಾಮೇಶ್ವರಂ ಕೆಫೆ ಓಪನ್ ಮಾಡಲು ಸಿಗದ ಅನುಮತಿ: ಪುನಾರಂಭ ದಿನಾಂಕ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಯುತ್ತಿದ್ದು, ಹೀಗಾಗಿ ಕೆಫೆ ಪುನಾರಂಭವನ್ನು ಮಾ.8ರ ಬದಲು ಮುಂದೂಡಿಕೆ ಮಾಡಲಾಗಿದೆ ಎಂದು ಮಾಲೀಕರು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಕುಂದಲಹಳ್ಳಿಯಲ್ಲಿ ಮಾ.1ರಂದು ರಾಮೇಶವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟದ ಪ್ರಕರಣದ ತನಿಖೆ ಮುಗಿದಿಲ್ಲ. ಬಾಂಬ್ ಇಟ್ಟುಹೋದ ಆರೋಪಿಯೂ ಸಿಕ್ಕಿಲ್ಲ. ಇಂಥದ್ದರಲ್ಲಿ ರಾಮೇಶ್ವರಂ ಕೆಫೆಯನ್ನು ಮಾ.8ರಂದು ಪುನಾರಂಭಿಸಲಾಗುವುದು ಎಂದು ಮಾಲೀಕರು ಹೇಳಿದ್ದರು. ಆದರೆ, ಈಗ ತನಿಖೆ ಬಾಕಿ ಇರುವ ಹಿನ್ನೆಲೆಯಲ್ಲಿ ಕೆಫೆ ಪುನಾರಂಭಕ್ಕೆ ಅನುಮತಿ ಕೊಡುವುದಿಲ್ಲ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕೆಫೆ ಪುನಾರಂಭ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ರಾಮೇಶ್ವರಂ ಕೆಫೆ ಮರು ಆರಂಭಕ್ಕೆ ಪೊಲೀಸ್‌ ಇಲಾಖೆಯಿಂದ ಪರ್ಮಿಷನ್ ಕೊಟ್ಟಿಲ್ಲ. ಬಾಂಬ್ ಸ್ಫೋಟದ ಕೇಸ್ ತನಿಖೆ ಬಾಕಿಯಿರುವ ಹಿನ್ನೆಲೆಯಲ್ಲಿ ಹೋಟೆಲ್ ಪುನಾರಂಭ ಮಾಡಲು ಅವಕಾಶ ನೀಡುತ್ತಿಲ್ಲ. ಬಾಂಬ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಕೆಲವು ಸಾಕ್ಷಿಗಳಿಗಾಗಿ ಇಲ್ಲಿನ ಸ್ಥಳದ ಪರಿಶೀಲನೆ ಅಗತ್ಯ ಬೀಳಬಹುದು. ಈ ಹಿನ್ನೆಲೆಯಲ್ಲಿ ಕೆಫೆ ಪುನಾರಂಭ ಮಾಡುವುದು ಬೇಡವೆಂದು ಪೊಲೀಸ್ ಇಲಾಖೆಯು ಮಾಲೀಕರಿಗೆ ಸೂಚನೆ ನೀಡಿದೆ.

ರಾಮೇಶ್ವರಂ ಕೆಫೆ ಮಾಲೀಕರು ನಾವು ಕೆಫೆಯನ್ನು ಮಾ.8ರ ಶುಕ್ರವಾರ (ಶಿವರಾತ್ರಿ ದಿನ) ಮರು ಆರಂಭ ಮಾಡುವುದಾಗಿ ತಿಳಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿಯೂ ಕೂಡ ಸಾವಿರಾರು ಜನರು ನಾವು ರಾಮೇಶ್ವರಂ ಕೆಫೆ ಪರವಾಗಿ ನಿಲ್ಲುತ್ತೇವೆ. ಬಾಂಬ್ ಬೆದರಿಕೆಗೆ ನಾವು ಬೆದರೋದಿಲ್ಲ ಎಂಬ ಸಂದೇಶವನ್ನು ಹಾಕಿಕೊಂಡು ಪೋಸ್ಟ್‌ ಮಾಡುತ್ತಿದ್ದಾರೆ. ಇನ್ನು ರಾಮೇಶ್ವರಂ ಕೆಫೆಯ ಅಧಿಕೃತ ಪೇಜ್ ಗಳಲ್ಲಿ ಕೂಡ ಮರು ಉದ್ಘಾಟನೆಯ ದಿನಾಂಕದ ಬಗ್ಗೆ ಪೋಸ್ಟ್ ಮಾಡಲಾಗಿತ್ತು. ಆದರೆ, ಈಗ ತನಿಖೆ ಇನ್ನೂ ಪ್ರಗತಿಯಲ್ಲಿ ಇರೋ ಕಾರಣ ಮರು ಆರಂಭಕ್ಕೆ ಅನುಮತಿ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!