ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಭು ಶ್ರೀರಾಮಚಂದ್ರನ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡುವ ರಾಮಲಲಾ ವಿಗ್ರಹ ಇನ್ನೂ ಅಂತಿಮವಾಗಿಲ್ಲ ಎಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತೆ ಸ್ಪಷ್ಟಪಡಿಸಿದೆ.
ಈ ಬಗ್ಗೆ ಸಮಾಜಿಕ ಜಾಲತಾಣಗಳು ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಟ್ರಸ್ಟ್ ಈ ಸ್ಪಷ್ಟನೆ ನೀಡಿದೆ.
ರಾಮಲಲಾ ವಿಗ್ರಹ ಆಯ್ಕೆ ಸಂಬಂಧ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಮತ್ತು ಇತರ ದರ್ಶಿಗಳೊಂದಿಗೆ ವಿಗ್ರಹದ ಬಗ್ಗೆ ಸಮಾಲೋಚಿಸಿ ಟ್ರಸ್ಟ್ ನಿರ್ಧಾರ ತೆಗೆದುಕೊಳ್ಳುತ್ತದೆ. ಟ್ರಸ್ಟ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಸೂಕ್ತ ಸಮಯದಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ಕಚೇರಿ ಉಸ್ತುವಾರಿ ಪ್ರಕಾಶ್ ಗುಪ್ತಾ ಅವರು ಹೇಳಿದ್ದಾರೆ.
ಪ್ರಭು ಶ್ರೀರಾಮನ ಐದು ವರ್ಷ ಮಗುವಿನ ರೂಪದ ವಿಗ್ರಹಗಳನ್ನು ಈಗಾಗಲೇ ಮೂರು ಜನ ಪರಿಣಿತವುಳ್ಳ ಶಿಲ್ಪಿಗಳು ತಯಾರಿಸಿದ್ದಾರೆ. ಈ ಮೂರು ವಿಗ್ರಹಗಳಲ್ಲಿ ಒಂದನ್ನು ರಾಮ ಮಂದಿರ ಟ್ರಸ್ಟ್ ಆಯ್ಕೆ ಮಾಡಲಿದೆ.