ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆಯ ಬೀದಿ ಬೀದಿಗಳು ತಳಿರು ತೋರಣಗಳಿಂದ ಅಲಂಕರಿಸಲಾಗಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಜಗತ್ತಿನಾದ್ಯಂತ ಇರುವ ಶ್ರೀರಾಮನ ಭಕ್ತರು ಕಾತರರಾಗಿದ್ದಾರೆ. ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದರೆ, ಹಲವು ರಾಜ್ಯಗಳು ಶಾಲಾ ಕಾಲೇಜುಗಳು ಸೇರಿದಂತೆ ಸರ್ಕಾರಿ ಸಂಸ್ಥೆಗಳಿಗೆ ರಜೆ ಘೋಷಿಸಿವೆ.
ದೆಹಲಿಯ ಏಮ್ಸ್ ಆಸ್ಪತ್ರೆಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಏಮ್ಸ್ ದೆಹಲಿ ಆಸ್ಪತ್ರೆ ಜನವರಿ 22 ರಂದು ಮಧ್ಯಾಹ್ನ 2:30 ರಿಂದ ಎಂದಿನಂತೆ ತೆರೆದಿರುತ್ತದೆ. ಆದರೆ ಸೋಮವಾರ ಮಧ್ಯಾಹ್ನ 2.30ರವರೆಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರುತ್ತವೆ ಎಂದು ಪ್ರಕಟಣೆ ತಿಳಿಸಿದೆ.
ಅಯೋಧ್ಯೆ ರಾಮಮಂದಿರದ ವೈಭವವನ್ನು ಕಣ್ತುಂಬಿಕೊಳ್ಳಲು ಭಕ್ತರು ಸಿದ್ಧರಾಗಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ಅರ್ಧ ದಿನ ರಜೆ ಘೋಷಿಸಲಾಗಿದ್ದು, ಅವರು ಪವಿತ್ರ ಕಾರ್ಯಕ್ರಮವನ್ನು ವೀಕ್ಷಿಸಲು ಮತ್ತು ಪೂಜೆ, ಭಜನೆಯಲ್ಲಿ ತೊಡಗಿಸಿಕೊಳ್ಳಲು ಅರ್ಧ ದಿನ ರಜೆ ಘೋಷಿಸಲಾಗಿದೆ. ರೋಗಿಗಳಿಗೆ ತೊಂದರೆಯಾಗದಂತೆ ಸಿಬ್ಬಂದಿಗೆ ರಜೆ ನೀಡಲಾಗಿದೆ. ಒಪಿಡಿ ವಿಭಾಗ ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.