Wednesday, February 21, 2024

ಆಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆ: ಜ.22ರ ಪ್ರಧಾನಿ ಮೋದಿ ವೇಳಾಪಟ್ಟಿ ವಿವರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶವೇ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾತುರದಿಂದ ಕಾಯುತ್ತಿದ್ದು, ಎಲ್ಲೆಡೆ ಸಂಭ್ರಮ, ಸಡಗರ ಮನೆ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಜನವರಿ 22ರಂದು ರಾಮಲಲ್ಲಾನ ಪ್ರಾಣಪ್ರತಿಷ್ಠೆ ನೆರವೇರಿಸಲಿದ್ದಾರೆ. ರಾಮ ಮಂದಿರದಲ್ಲಿ ಈಗಾಗಲೋ ಪೂಜಾ ಕೈಂಕರ್ಯಗಳು ನಡೆಯುತ್ತಿದೆ. ಜನವರಿ 22ರಂದು ಪ್ರಾಣಪ್ರತಿಷ್ಠೆ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ. ಇಷ್ಟೇ ಅಲ್ಲ ಹಲವು ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ.

ಆಯೋಧ್ಯೆಯಲ್ಲಿ ಪ್ರಧಾನಿ ಮೋದಿ ವೇಳಾಪಟ್ಟಿ:

ಮಧ್ಯಾಹ್ನ 12.05ಕ್ಕೆ ರಾಮ ಮಂದಿರದ ಗರ್ಭಗುಡಿಗೆ ಪ್ರಧಾನಿ ಮೋದಿ ಪ್ರವೇಶ
ರಾಮಲಲಾ ಪ್ರಾಣಪ್ರತಿಷ್ಠೆ ನೇರವೇರಿಸಲಿರುವ ಪ್ರಧಾನಿ ಮೋದಿ
ರಾಮಲಲಾಗೆ ವಿಶೇಷ ಆರತಿ ಪೂಜೆ ನೆರವೇರಿಸಲಿರುವ ಪ್ರಧಾನಿ ಮೋದಿ
ಮಧ್ಯಾಹ್ನ 1 ಗಂಟೆಗೆ ಆಯೋಧ್ಯೆಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿ
2.30ಕ್ಕೆ ಆಯೋಧ್ಯೆಯಲ್ಲಿರುವ ಶಿವ ಮಂದಿರ ಕುಬೇರ ಟೀಲಾ ದೇವಸ್ಥಾನಕ್ಕೆ ಮೋದಿ ಬೇಟಿ ಹಾಗೂ ದರ್ಶನ

ರಾಮ ಮಂದಿರ ಪ್ರಾಣಪ್ರತಿಷ್ಠೆಗೂ ಮೊದಲು ಪ್ರಧಾನಿ ಮೋದಿ ಸರಯು ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆಯಲ್ಲಿ ಈಗಾಗಲೇ 11 ದಿನಗಳ ಕಠಿಣ ವೃತ ಕೈಗೊಂಡಿರುವ ಪ್ರಧಾನಿ ಮೋದಿ, ರಾಮಾಯಣ ಕಾಲದಿಂದ ಗುರುತಿಸಲ್ಪಟ್ಟಿರುವ ಹಲವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ರಾಮೇಶ್ವರಂ ರಂಗನಾಥಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!