ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕನೇ ಸುತ್ತಿನಲ್ಲೂ ನಿಖಿಲ್ ಕುಮಾರಸ್ವಾಮಿ ಮುನ್ನಡೆಯಲ್ಲಿದ್ದಾರೆ.
ಎರಡನೇ ಸುತ್ತಿನ ಅಂತ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ 16,721 ಮತಗಳನ್ನು ಪಡೆದು 3011 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 13,710 ಮತಗಳನ್ನು ಪಡೆದು ಹಿನ್ನೆಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೌತಮ್ ಗೌಡ ಕೇವಲ 2133 ಮತಗಳನ್ನು ಪಡೆದಿದ್ದಾರೆ.