ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಜೀವಾವಧಿ ಶಿಕ್ಷೆಯಾಗಲಿ ಎಂಬ ಪೋಸ್ಟ್‌ನ ರಿ ಟ್ವೀಟ್ ಮಾಡಿದ್ದ ನಟಿ ರಮ್ಯಾ ಇದೀಗ, ಮತ್ತೊಂದು ಟ್ವೀಟ್ ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕುಟುಂಬದ ಪರ ನಿಂತ ನಟಿ, ಪ್ರಕರಣದಲ್ಲೇ ಯಾರೇ ತಪ್ಪಿತಸ್ಥರಾದರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರವಾಗಿ ಮಂಗಳವಾರ ರಿ ಟ್ವೀಟ್ ಮಾಡಿದ್ದ ಸ್ಯಾಂಡಲ್ ವುಡ್ ನಟಿ ರಮ್ಯಾ, ಇದೀಗ ಮತ್ತೊಂದು ಪೋಸ್ಟ್ ರಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ರೇಣುಕಾ ಸ್ವಾಮಿ ತಂದೆ ದು:ಖದಲ್ಲಿರುವ ವಿಡಿಯೋವನ್ನು ಅಕ್ಷಯ್ ಅಕ್ಕಿ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡು, ಯಾರೇ ಆದ್ರೂ ನ್ಯಾಯ ಎತ್ತಿ ಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನು ನಟಿ ರಮ್ಯಾ ರಿ ಟ್ವೀಟ್ ಮಾಡಿದ್ದಾರೆ.
https://x.com/FollowAkshay1/status/1800522528018067897
ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್‌ಗೆ (Actor Darshan) ಮರಣದಂಡನೆಯಾಗಲಿ ಎಂಬ ಸಂದೇಶವನ್ನು ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನಿನ್ನೆ ಹಂಚಿಕೊಂಡಿದ್ದರು. ಈ ಸೆಕ್ಷನ್ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇದ್ದ ಪೋಸ್ಟ್ ಅನ್ನು ರಮ್ಯಾ ರಿ ಟ್ವೀಟ್ ಮಾಡಿದ್ದರು.