ಎಕ್ಸ್‌ನಲ್ಲಿ ರಮ್ಯ ಪೋಸ್ಟ್: ಹ್ಯಾಶ್ ಟ್ಯಾಗ್‌ನಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್, ಯಡಿಯೂರಪ್ಪ, ಸೂರಜ್ ರೇವಣ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣದಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ಸುದ್ದಿಯಾಗಿದ್ದಾರೆ.
ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿಹೋಗಿದೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ, ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಈ ಪೋಸ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್, ಯಡಿಯೂರಪ್ಪ, ಸೂರಜ್ ರೇವಣ್ಣ ಹೆಸರನ್ನು ಹ್ಯಾಶ್ ಟ್ಯಾಗ್ ಮೂಲಕ ಉಲ್ಲೇಖಿಸಿದ್ದಾರೆ.

ಏನಿದೆ ರಮ್ಯಾ ಪೋಸ್ಟ್‌ನಲ್ಲಿ?
ಶ್ರೀಮಂತರು ಮತ್ತು ಶಕ್ತಿಶಾಲಿಗಳು ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿದ್ದಾರೆ. ಅವರ ಹಿಂಸಾತ್ಮಕ ಕೃತ್ಯಗಳಿಗೆ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಈ ಅಪರಾಧಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ಪ್ರಕರಣಗಳ ವಿಚಾರಣೆ ತ್ವರಿತಗೊಳಿಸಿ, ಅವುಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ನಿಜವಾಗಿ ನ್ಯಾಯ ಒದಗಿಸಬಹುದು. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!