ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಇಂದು ರಂಜಾನ್ ಆಚರಣೆ ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಮುಸ್ಲಿಂ ಬಾಂಧವರಿಗೆ ಶುಭಕೋರಿದ್ದಾರೆ.
ಯುಗಾದಿ ಮುಗಿಯುತ್ತಿದ್ದಂತೆಯೇ ರಂಜಾನ್ ಆಚರಣೆ ಮಾಡಲಾಗುತ್ತಿದೆ. ಯುಗಾದಿ ದಿನವೇ ರಂಜಾನ್ ಚಂದ್ರ ದರುಶನವಾಗಿದ್ದು, ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಆಚರಣೆ ಮಾಡುತ್ತಿದ್ದಾರೆ.
ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ, ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಶುಭಕೋರಿದ್ದಾರೆ.
ರಂಜಾನ್ ಹಿನ್ನೆಲೆ ಬೆಂಗಳೂರಿನ ಚಾಮರಾಚಪೇಟೆಯಲ್ಲಿರೋ ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.