Tuesday, September 27, 2022

Latest Posts

ರಾಣಾ ಎರಡನೇ ಸಿನಿಮಾ ನಿರ್ದೇಶಿಸಲಿದ್ದಾರೆ ವಿಜಯ್ ಈಶ್ವರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಿರ್ದೇಶಕ ಪ್ರೇಮ್ ಜೊತೆಗೆ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್ ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯಲು ಸಜ್ಜಾಗಿದ್ದು, ತಮ್ಮ ಮೊದಲ ಸಿನಿಮಾದಲ್ಲಿ ರಾಣಾಗೆ ಡೈರೆಕ್ಟ್ ಮಾಡಲಿದ್ದಾರೆ.

ಏಕ್ ಲವ್ ಯಾ ಸಿನಿಮಾ ಮೂಲಕ ಸ್ಯಾಂಡಲ್​​ವುಡ್ ಅಂಗಳಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ರಕ್ಷಿತಾ ಅವರ ಸಹೋದರ ರಾಣಾ ತಮ್ಮ ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದು, ಇದೀಗ ಎರಡನೇ ಸಿನಿಮಾದಲ್ಲಿ ನಟಿಸಲಿದ್ದಾರೆ.
ರಾಣಾ ಮುಂದಿನ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಯುವ ನಿರ್ದೇಶಕ ವಿಜಯ್ ಈಶ್ವರ್.  ನಿರ್ದೇಶಕ ಪ್ರೇಮ್ ಜೊತೆಗೆ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇದ್ದು, ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯಲು ಸಜ್ಜಾಗಿದ್ದಾರೆ. ತಮ್ಮ ಮೊದಲ ಸಿನಿಮಾದಲ್ಲಿ ರಾಣಾಗೆ ಡೈರೆಕ್ಟ್ ಮಾಡಲಿದ್ದಾರೆ. ವಿಜಯ್ ಈಶ್ವರ್ ಮಾಡಿಕೊಂಡ ವಿಷಯ ನಟ ರಾಣಾ ಅವರಿಗೂ ಇಂಪ್ರೆಸ್ ಮಾಡಿದ್ದು, ವಿಜಯ್ ಜೊತೆ ಕೈಜೋಡಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!