ಮೀಸಲಾತಿ ಹೆಸರಲ್ಲಿ ಬಿಜೆಪಿ ಸರ್ಕಾರಗಳಿಂದ ಮೋಸದಾಟ: ಸುರ್ಜೇವಾಲ ಟೀಕೆ

ಹೊಸದಿಗಂತ ವರದಿ ಮೈಸೂರು:

ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ದ್ರೋಹವಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ ಟೀಕಿಸಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಮೀಸಲಾತಿ ಮೋಸದಾಟವನ್ನು
ಕಾಂಗ್ರೆಸ್ ಸದಾ ಹೇಳುತಿತ್ತು ಒಕ್ಕಲಿಗ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಲಾಲಿಪಾಪ್ ಕೊಟ್ಟಂತೆ ಆಗಿದೆ.
ಚುನಾವಣೆವರೆಗೂ ಈ ರೀತಿ ಸುಳ್ಳು ಭರವಸೆ ಕೊಡುವುದಾಗಿತ್ತು ಇದು ಸುಪ್ರೀಂಕೋರ್ಟ್‌ನಲ್ಲಿ ಬಯಲಾಗಿದೆ ಎಂದರು.

ಮೀಸಲಾತಿ ಬಗ್ಗೆ ಏಕೆ ಮೋಸದಾಟ ಆಡಿದಿರಿ ?
ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥನೆ ಮಾಡಿಕೊಳ್ಳಲಿಲ್ಲ?
ಸುಪ್ರೀಂ ಕೋರ್ಟ್‌ನಲ್ಲಿ ಅಫಿಡೆವಿಟ್ ಹಾಕಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಸರ್ಕಾರ ಮೀಸಲಾತಿ ಚಾಕೊಲೆಟ್ ಕೊಟ್ಟು ವಿಶ್ವಾಸ ದ್ರೋಹ ಮಾಡಿದೆ. ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರ ಜೇನುಗೂಡಿಗೆ ಕೈ ಹಾಕಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಮೇ 13 ರ ಚುನಾವಣಾ ಫಲಿತಾಂಶದ ದಿನ ಬಿಜೆಪಿ ಸರ್ಕಾರದ ಶವಯಾತ್ರೆ ನಡೆಯಲಿದೆ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಕ್ಐಕೊಟ್ಟಿದೆ. ಕಾಂಗ್ರೆಸ್ 150 ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಚುನಾವಣೆ ಸಮಯದಲ್ಲಿ ಪ್ರತಿದಿನ ನನ್ನ ವಿರುದ್ಧ ತಂತ್ರ, ಕುತಂತ್ರ ಮಾಡುತ್ತಿದ್ದಾರೆ. ನನ್ನ ಹಾಗೂ ಸಿದ್ದರಾಮಯ್ಯ ಕ್ಷೇತ್ರಕ್ಕೆ ಒಬ್ಬರಲ್ಲ, ಇಬ್ಬರಲ್ಲ, ಮೂವರನ್ನು ನೇಮಕ ಮಾಡಲಿ ನಾವೇನು ಹೆದರುವುದಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!