ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ, ರಾಣೆಬೆನ್ನೂರಿನ ಮುಖಂಡ ಆರ್.ಶಂಕರ್ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಸೇರ್ಪಡೆಗೊಂಡ ನಂತರ ಮಾತನಾಡಿದ ಸಚಿವ ಆರ್.ಶಂಕರ್, ತಾಲೂಕಿನ ಅಭಿವೃದ್ಧಿಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೆ ಆದರೆ ನನ್ನ ನಂಬಿಕೆ ಹುಸಿಯಾಗಿದೆ ಎಂದು ಕಿಡಿಕಾರಿದ್ದಾರೆ. ಚುನಾವಣೆ ಸಮಯದಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಭಿನ್ನಾಭಿಪ್ರಾಯ ಮುಂದುವರಿದಿದೆ.