ರಂಗೇರಿದ ಚುನಾವಣಾ ಅಖಾಡ: ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮುಂದಾದ ದಳಪತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಾವು ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೆ ಬಹಳ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ದಕ್ಕಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ.

ಆದರೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಏನು ಎಂಬುದು ತಿಳಿದಿಲ್ಲ. ಮತ್ತೊಂದೆಡೆ ದಳಪತಿಗಳು ಮಂಡ್ಯ ಕ್ಷೇತ್ರವನ್ನು ಗೆಲ್ಲಲು ಇದೀಗ ಸಂಧಾನ ಸೂತ್ರ ನಡೆಸಲು ಚಿಂತಿಸಿದ್ದಾರೆ ಎಂಬ ವರದಿ ಲಭ್ಯವಾಗಿದೆ.

ಮಂಡ್ಯದ ಕಾರ್ಯಕರ್ತರ ಒತ್ತಡಕ್ಕೆ ಮಣಿದ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ದಿಸಲು ಮಣಿದಿದ್ದಾರೆ. ಆದರೆ, ಕುಮಾರಸ್ವಾಮಿಗೆ ಮಂಡ್ಯದಿಂದ ಸ್ಪರ್ದಿಸುವುದನ್ನ ವಿರೋಧಿಸಿ ರಾಮನಗರ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಚನ್ನಪಟ್ಟಣದಲ್ಲೇ ಕುಮಾರಸ್ವಾಮಿ ಉಳಿಯಬೇಕು, ಮಂಡ್ಯದಿಂದ ನಿಖಿಲ್ ಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇವರಿಬ್ಬರಲ್ಲಿ ಯಾರು ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!