ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರಿದೆ. ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತ್ಯೇಕವಾಗಿ ಮತಯಾಚನೆ ಮಾಡುತ್ತಿದ್ದಾರೆ.
10ಕ್ಕೂ ಹೆಚ್ಚು ಗ್ರಾಮದಲ್ಲಿ ಪುತ್ರನ ಪರ ಮತಯಾಚನೆ ನಡೆಸಲಿದ್ದಾರೆ, ನಿಖಿಲ್ 15 ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದಾರೆ.
ಇದರೊಂದಿಗೆ ಪತ್ನಿ ರೇವತಿ ಕೂಡ ನಿಖಿಲ್ ಪರವಾಗಿ ಮತಬೇಟೆಗಿಳಿದಿದ್ದಾರೆ. ಚನ್ನಪಟ್ಟಣದ ಮಹಿಳಾ ಕಾಲೇಜು ಮುಂಭಾಗ ವಿದ್ಯಾರ್ಥಿಗಳಿಗೆ ಕರಪತ್ರ ಹಂಚಿ ನಿಖಿಲ್‌ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ರೇವತಿ ಅವರಿಗೆ ಜೆಡಿಎಸ್ ಮಹಿಳಾ ಕಾರ್ಯಕರ್ತರು ಸಾಥ್ ನೀಡಿದ್ದಾರೆ.