ಹೊಸದಿಗಂತ ವರದಿ, ಕಲಬುರಗಿ:
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಕ್ಲೀನ್ ಸಿಟಿ ಗ್ರೀನ್ ಸಿಟಿ ಉದ್ದೇಶದಿಂದ ಸೋಮವಾರ ಇಲ್ಲಿನ ಟೌನ್ ಹಾಲ್ ಬಳಿ ಮಹಾನಗರ ಪಾಲಿಕೆ ಹಾಗೂ ಮನ್ನೂರು ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ರಂಗೋಲಿ ಸ್ಪರ್ಧೆಯಲ್ಲಿ ಚಿಕ್ಕ ಮಕ್ಕಳು ಹಾಗೂ ಮಹಿಳೆಯರು ಸೇರಿ ಅನೇಕರು ಸಂಭ್ರಮದಿಂದ ಭಾಗವಹಿಸಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ಚಿಕ್ಕ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು.
ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಪ್ರೋತ್ಸಾಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಳಿನ್ ಅತುಲ್, ಜಿಲ್ಲಾ ಪಂಚಾಯತ್ ಸಿಇಓ ಡಾ. ದೀಲಿಪ್ ಶಶಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಆಗಮಿಸಿದರು.
ಈ ಸಂದರ್ಭದಲ್ಲಿ ಮುನ್ನೂರು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಫರುಖ್ ಮನ್ನೂರು, ಎಇಇ ಮುನ್ನಫ ಪಟೇಲ್, ಪರಿಸರ ಅಭಿಯಂತರ ಮೇಲ್ಕೆರಿ ಬಾಬು ಸೇರಿ ಅನೇಕರು ಇದ್ದರು